ಪಿಎಫ್‌ಐ, ಎಸ್‌ಡಿಪಿಐನೊಂದಿಗೆ ಕಾಂಗ್ರೆಸ್‌ ನಂಟಿಲ್ಲ– ರಾಮಲಿಂಗಾರೆಡ್ಡಿ

ಶುಕ್ರವಾರ, 26 ಜನವರಿ 2018 (18:08 IST)
ಪಿಎಫ್ಐ ಹಾಗೂ ಎಸ್‌ಡಿಪಿಐ ಸಂಘಟನೆಗಳೊಂದಿಗೆ ಕಾಂಗ್ರೆಸ್ ಪಕ್ಷ ಯಾವುದೇ ನಂಟು ಹೊಂದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆ ಸಂಘಟನೆಗಳೊಂದಿಗೆ ನಂಟು ಹೊಂದಿರುವುದು ಕೋಮುವಾದಿ ಪಕ್ಷ ಬಿಜೆಪಿ, ಅವರು ಇಂತಹ ಕೃತ್ಯಗಳಲ್ಲಿ ಕೈ ಜೋಡಿಸುತ್ತಾರೆ ಎಂದು ಟೀಕಿಸಿದ್ದಾರೆ.
 
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಕೋಮು ಗಲಭೆ ಪ್ರಕರಣಗಳನ್ನು ಹಿಂಪಡೆದಿದ್ದರು. ಉತ್ತರ ಪ್ರದೇಶದಲ್ಲೂ ಬಿಜೆಪಿ ಕೋಮುಗಲಭೆ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದೆ. ಆದರೆ, ನಮ್ಮ ಸರ್ಕಾರ ಸಣ್ಣಪುಟ್ಟ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದೆ. ಗಂಭೀರ ಪ್ರಕರಣಗಳು ಅಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ