ಕಾಂಗ್ರೆಸ್ ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇನೆ- ಸಿಎಂ ಸಿದ್ದರಾಮಯ್ಯ

ಶುಕ್ರವಾರ, 11 ಮೇ 2018 (13:44 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಅಟ್ಯಾಕ್ ಮಾಡುತ್ತಿದ್ದಾರೆ ಎಂದು ಬಿಜೆಪಿಯವರು ಆರೋಪ ಮಾಡಿರುವ ಹಿನ್ನಲೆಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಇದೀಗ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,’ ಬಿಜೆಪಿ ನಾಯಕರ ಮಾತುಗಳು ಕಾಮಿಡಿ ಶೋ ರೀತಿ ಭಾಸವಾಗುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ನನ್ನ ಮೇಲೆ ಅಟ್ಯಾಕ್ ಮಾಡುತ್ತಿದ್ದಾರೆ ಎಂದು ಬಿಜೆಪಿಯವರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಕಠಿಣ ಶಬ್ದಗಳಲ್ಲಿ ತಿರುಗೇಟು ನೀಡಿದ್ದೇನೆ ಎಂದು ಹೇಳಿದ್ದಾರೆ. 
 
ಹಾಗೆ 'ನಮ್ಮ ನಿಲುವು ಒಂದು ಜಾತಿ, ಧರ್ಮಕ್ಕೆ ಸೇರಿಲ್ಲ. ನಮಗೆ ಎಲ್ಲ ಜಾತಿ, ಧರ್ಮಗಳು ಒಂದೇ. ಕಾಂಗ್ರೆಸ್ ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇನೆ' ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ