ಬರ ನಿರ್ವಹಣಾ ಸಂಪುಟ ಸಮಿತಿ ಸಭೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವೆ ವಾಕ್ಸಮರ

ಶನಿವಾರ, 2 ಫೆಬ್ರವರಿ 2019 (10:11 IST)
ಹಾಸನ : ದೋಸ್ತಿ ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬುದಕ್ಕೆ  ಬರ ನಿರ್ವಹಣಾ ಸಂಪುಟ ಸಮಿತಿ ಸಭೆಯಲ್ಲಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಮಧ್ಯೆ  ನಡುವೆ ನಡೆದ ವಾಕ್ಸಮರವೇ ಮತ್ತೊಂದು ಸಾಕ್ಷಿಯಾಗಿದೆ.


ಸಂಪುಟ ಉಪ ಸಮಿತಿ ಅಧ್ಯಕ್ಷ ಕೃಷ್ಣಬೈರೇಗೌಡ ನೇತೃತ್ವದ ಸಚಿವರ ತಂಡ ಹಾಸನ ಜಿಲ್ಲೆಯ ಬರಪೀಡಿತ ಪ್ರದೇಶಕ್ಕೆ ಶುಕ್ರವಾರ ಭೇಟಿ ಮಾಡಿ ನಂತರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಸಭೆಯಲ್ಲಿ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಸೇರಿದಂತೆ ಸಚಿವರುಗಳಾದ ಕೃಷ್ಣಬೈರೇಗೌಡ, ಸಿ.ಎಸ್. ಪುಟ್ಟರಾಜು, ಯು.ಟಿ ಖಾದರ್, ಜಯಮಾಲಾ ಹಾಗೂ ಜಿಲ್ಲೆಯ ಎಲ್ಲಾ ಶಾಸಕರೂ ಕೂಡಾ ಭಾಗವಹಿಸಿದ್ದರು.


ಈ ಸಭೆಯಲ್ಲಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಮಧ್ಯೆ ವಾಕ್ಸಮರ ಏರ್ಪಟ್ಟಿತ್ತು. ಕಳೆದ ಹತ್ತು ವರ್ಷದಿಂದ ಹಾಸನ ಅಭಿವೃದ್ಧಿ ಕಾಣಲಿಲ್ಲ ಎನ್ನುವ ರೇವಣ್ಣ ಮಾತಿಗೆ ಕೆರಳಿದ ಗೋಪಾಲಸ್ವಾಮಿ, ನಮ್ಮ ಸಿದ್ದರಾಮಯ್ಯ ಸರ್ಕಾರದಲ್ಲಿ ಹಾಗಾದ್ರೆ ಏನೂ ಆಗಲಿಲ್ಲವೇ ಎಂದು ಗರಂ ಆಗಿ ಕೇಳಿದ್ದರು. ಇದಕ್ಕೆ  ರೇವಣ್ಣ , ರೀ ಗೋಪಾಲ್, ಸುಮ್ನೆ ಕೂತ್ಕಳ್ರಿ ಏನಾಗಿದೆ ಅಂತ ನನಗೆ ಗೊತ್ತಿದೆ ಎಂದು ಏರು ಧ್ವನಿಯಲ್ಲಿಯೇ  ವ್ಯಂಗ್ಯವಾಡಿದ್ದಾರೆ. ಇವರಿಬ್ಬರ ಈ ಮಾತಿನ ಸಮರ ಸಭೆಯಲ್ಲಿ ಕೆಲಕಾಲ ಗೊಂದಲಕ್ಕೆ ಕಾರಣವಾಯಿತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ