ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಕಾಂಗ್ರೆಸ್ ಮುಖಂಡ, ಗ್ರಾಮಪಂಚಾಯತಿ ಸದಸ್ಯನ ಬರ್ಬರ ಹತ್ಯೆ

ಶುಕ್ರವಾರ, 14 ಡಿಸೆಂಬರ್ 2018 (12:23 IST)
ಬೆಳಗಾವಿ : ಕಾಂಗ್ರೆಸ್ ಮುಖಂಡನೊರ್ವನನ್ನು ಚೂರಿಯಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಂಟಮೂರಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.


ಕೊಲೆಯಾದ ವ್ಯಕ್ತಿ ಗ್ರಾಮಪಂಚಾಯತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಣ್ಣೆಪ್ಪ ಪಾಟೀಲ (40) ಎಂಬುದಾಗಿ ಗುರುತಿಸಲಾಗಿದ್ದು, ಈತ ಗ್ರಾಮಪಂಚಾಯತಿ ಅಧ್ಯಕ್ಷ ಶಿವಾಜಿ ವನ್ನೂರೆ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದಕ್ಕಾಗಿ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರು ಸೇರಿ ಈ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.


ಈ ಘಟನೆಗೆ  ಸಂಬಂಧಿಸಿದಂತೆ  8 ಜನರನ್ನು ಬಂಧಿಸಲಾಗಿದ್ದು, ಈ ಕುರಿತು ಕಾಕತಿ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ