ಸಂವಿಧಾನ ಬದಲಾವಣೆಗೆ ಮುಂದಾದರೆ ದಂಗೆಯಾಗಲಿದೆ– ಸಿಎಂ ಎಚ್ಚರಿಕೆ

ಸೋಮವಾರ, 15 ಜನವರಿ 2018 (14:57 IST)
ಸಂವಿಧಾನ ಬದಲಾವಣೆ ಮಾಡಲು ಮುಂದಾದರೆ ಶೋಷಿತ ವರ್ಗ ದಂಗೆ ಏಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜಾತ್ಯಾತೀತ ತತ್ವ ಪ್ರತಿಪಾದಿಸುವ ಸಂವಿಧಾನವನ್ನು ಬದಲಾವಣೆ ಮಾಡಲು ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಒಂದುವೇಳೆ ಇದು ನಿಜವಾದರೆ, ಜನರು ದಂಗೆ ಏಳಲಿದ್ದಾರೆ ಎಂದು ತಿಳಿಸಿದ್ದಾರೆ.

ಸ್ವಧರ್ಮದ ನಿಷ್ಠೆಯ ಜೊತೆಗೆ ಬೇರೆ ಧರ್ಮವನ್ನು ಗೌರವಿಸುವ ಸಹಿಷ್ಣುತೆ ಬೆಳೆಸಿಕೊಳ್ಳಬೇಕು. ಧರ್ಮಗಳ ನಡುವೆ ಕಂದಕ ನಿರ್ಮಿಸಲು ಪ್ರಯತ್ನಿಸುವುದು ಸರಿಯಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ