ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಸೋಮವಾರ, 4 ಸೆಪ್ಟಂಬರ್ 2017 (19:25 IST)
ಇಬ್ಬರು ಬಾಲಕಿಯರನ್ನು ಅಪಹರಿಸಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ್ದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 30 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಕಳೆದ 2015ರ ಏಪ್ರಿಲ್ 19 ರಂದು ಆರೋಪಿ ಮಾರಣ್ಣ ಇಬ್ಬರು ಬಾಲಕಿಯರನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ . ಯಾರಿಗಾದರೂ ವಿಷಯ ಬಹಿರಂಗಪಡಿಸಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
 
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಿಂಗಳಗೆರೆ ಗ್ರಾಮದ ಆರೋಪಿ, ಬಾಲಕಿಯರನ್ನು ಬಳ್ಳಾರಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ನಂತರ ಜೀವ ಬೆದರಿಕೆಯೊಡ್ಡಿ ಇಬ್ಬರು ಬಾಲಕಿಯರ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷೆನ್ಸ್ ನ್ಯಾಯಾಲಯದ ನ್ಯಾಯಮೂರ್ತಿಗಳು ಆರೋಪಿ ಮಾರಣ್ಣನಿಗೆ ಜೀವಾವಧಿ ಶಿಕ್ಷೆ ಮತ್ತು 30 ಸಾವಿರ ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 
 

ವೆಬ್ದುನಿಯಾವನ್ನು ಓದಿ