ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಪತ್ರಕ್ಕೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಮುಖ್ಯಮಂತ್ರಿಗೆ ಪತ್ರ ಬರೆದ ಬಳಿಕ ನನ್ನ ಫೋನ್ ರಿಂಗಣಿಸುವುದು ನಿಲ್ಲಿಸಿಲ್ಲ. ಬೆದರಿಕೆ ಕರೆಗಳು ಬರುತ್ತಿವೆ. ಆದರೆ, ಈ ದೇಶವನ್ನು ಅತ್ಯಂತ ಅಪಾಯಕಾರಿ viRuSS (ವೈರಸ್‌ಗಳಿಂದ) ಶುದ್ಧೀಕರಿಸಬೇಕಿದೆ ಎಂದು ಖರ್ಗೆ ಪುನರುಚ್ಚರಿಸಿದ್ದಾರೆ.
ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೆಟ್ಟ ನಿಂದನೆಗಳಿಂದ ತುಂಬಿಹೋಗಿವೆ. ಆದರೆ,. ನಾನು ಇದರಿಂದ ವಿಚಲಿತನಾಗುವುದಿಲ್ಲ ಅಥವಾ ಆಶ್ಚರ್ಯಪಡುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ತಿರುಗೇಟು ನೀಡಿದ್ದಾರೆ.
ಮಹಾತ್ಮ ಗಾಂಧಿ ಅಥವಾ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದ ಆರ್‌ಎಸ್‌ಎಸ್, ನನ್ನನ್ನೇಕೆ ಬಿಡುತ್ತಾರೆ? ಬೆದರಿಕೆಗಳು ಮತ್ತು ವೈಯಕ್ತಿಕ ನಿಂದನೆಗಳು ನನ್ನನ್ನು ಮೌನಗೊಳಿಸುತ್ತವೆ ಎಂದು ಅವರು ಭಾವಿಸಿದರೆ, ಅದು ಅವರ ತಪ್ಪು ಭಾವನೆ. ಇದು ಕೇವಲ ಆರಂಭವಷ್ಟೇ ಎಂದು ಹೇಳಿದ್ದಾರೆ.
ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬ್ ಅವರ ತತ್ವಗಳ ಮೇಲೆ ಸ್ಥಾಪಿತವಾದ ಸಮಾಜವನ್ನು ನಿರ್ಮಿಸಲು ಇದು ಸೂಕ್ತ ಸಮಯ. ಸಮಾನತೆ, ವಿವೇಚನೆ ಮತ್ತು ಕರುಣೆಯಲ್ಲಿ ಬೇರೂರಿರುವ ಸಮಾಜ ಕಟ್ಟಬೇಕಿದೆ ಎಂದು ಹೇಳಿದ್ದಾರೆ.