ದೇಶದ ಮೊದಲ ಹಸಿರು ಸಂಚಾರಿ ಪಥ ಕಾಮಗಾರಿ : ಜಗದೀಶ್ ಶೆಟ್ಟರ್

ಸೋಮವಾರ, 4 ಏಪ್ರಿಲ್ 2022 (07:46 IST)
ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಹುಬ್ಬಳ್ಳಿಯಲ್ಲಿ ದೇಶದ ಮೊದಲ ಹಸಿರು ಸಂಚಾರಿ ಪಥ ಕಾಮಗಾರಿ ಮಾಡಲಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯಡಿ 80 ಕೋಟಿ ರೂ. ವೆಚ್ಚದಲ್ಲಿ 9.2 ಕಿ.ಮೀ. ಉದ್ದದ ಹಸಿರು ಸಂಚಾರಿ ಪಥ,

( ಗ್ರೀನ್ ಮೋಬಿಲಿಟಿ ಕಾರಿಡಾರ್) ಕಾಮಗಾರಿಯು ದೇಶದ 100 ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮೊದಲನೆಯದಾಗಿ ಅನುಷ್ಠಾನ ಮಾಡಲಾಗುತ್ತಿದೆ.

ಮೊದಲ ಹಂತದಲ್ಲಿ 7.2 ಕೋಟಿ ವೆಚ್ಚದಲ್ಲಿ 640 ಮೀಟರ್ ಉದ್ದದ ನಾಲಾ ಅಭಿವೃದ್ಧಿ ಹಾಗೂ ಸೈಕಲ್ ಪಾತ್ ನಿರ್ಮಾಣ ಮಾಡಲಾಗಿದೆ. ಮುಂದಿನ 15 ದಿನಗಳಲ್ಲಿ ಉದ್ಘಾಟನೆ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಲಾಗುತ್ತಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ