ಅಗ್ನಿಪಥ್ ಸಿಂಧುತ್ವ ಎತ್ತಿ ಹಿಡಿದ ಕೋರ್ಟ್
ಅಗ್ನಿಪಥ್ ಯೋಜನೆಯ ಸಿಂಧುತ್ವವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ. ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ದೆಹಲಿ ಹೈಕೋರ್ಟ್, ಈ ಬಗ್ಗೆ ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿದೆ. ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಇಂದು ವಜಾಗೊಳಿಸಿದೆ. ಈ ಬಗ್ಗೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಶಸ್ತ್ರ ಪಡೆಗಳು ಸುಸಜ್ಜಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಈ ಯೋಜನೆಯನ್ನು ಮಾಡಲಾಗಿದೆ ಎಂದು ನ್ಯಾಯಾಲಯ ಹೇಳಿದೆ.