ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿ ಸಾವು

ಶನಿವಾರ, 9 ಅಕ್ಟೋಬರ್ 2021 (20:16 IST)
ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಲೋಕೋಪಯೋಗಿ ಇಲಾಕೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ರಿಂದ ಅಪಘಾತವೆಸಗಿದ ಟಿಪ್ಪರ್ ಲಾರಿ ಚಾಲಕ ಹಾಗೂ ಎರಡು ಇಲಾಖೆ ಅಧಿಕಾರಿಗಳ ಮೇಲೆ ಎಫ್ ಐಆರ್ ದಾಖಲಾಗಿದೆ. ನಿನ್ನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ರಸ್ತೆ ಗುಂಡಿ ತಪ್ಪಿಸುವ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ನುಬಿಯಾ ಎಂಬಾಕೆ ಸ್ಥಳದಲ್ಲೆ ಸಾವನ್ನಪ್ಪಿದ್ರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಸವಾರ ಅರ್ಹನ್ ನೀಡಿದ ದೂರಿನ ಮೇಲೆ ಮಾದನಾಯಕನಹಳ್ಳಿ ಪೊಲೀಸ್ರು ಎಫ್ಐಆರ್ ದಾಖಲಿಸಿದ್ದಾರೆ. ಗುಂಡಿ ತಪ್ಪಿಸುವ ವೇಳೆ ಬೈಕ್ ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ ಚಾಲಕ ಪ್ರಕರಣದಲ್ಲಿ ಮೊದಲ ಆರೋಪಿಯಾದ್ರೆ, ರಸ್ತೆಗುಂಡಿಯನ್ನ ಕಾಲ ಕಾಲಕ್ಕೆ ಮುಚ್ಚದೆ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆ ಅಧಿಕಾರಿಯನ್ನ ಎರಡನೇ ಆರೋಪಿಯನ್ನಾಗಿ ಹಾಗೂ ಚರಂಡಿ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಮಾಡದೆ, ರಸ್ತೆ ಮೇಲೆ ಬಿಟ್ಟ ಆರೋಪದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಯನ್ನ ಮೂರನೇ ಆರೋಪಿಯನ್ನಾಗಿ ಮಾಡಿ ಎಫ್ ಐಆರ್ ದಾಖಲು ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ