ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಮತ್ತೋರ್ವ ಮಹಿಳೆ ಸಾವು, ಸಾವಿನ ಸಂಖ್ಯೆ 15 ಕ್ಕೆ ಏರಿಕೆ
ಮಂಗಳವಾರ, 18 ಡಿಸೆಂಬರ್ 2018 (14:20 IST)
ಮೈಸೂರು : ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ನಿವಾಸಿ ದುಂಡಮ್ಮ (50) ಸಾವನಪ್ಪಿದ ಮಹಿಳೆ. ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿ ದುಂಡಮ್ಮ ಅಸ್ವಸ್ಥರಾಗಿದ್ದು, ಅವರನ್ನು ಮೈಸೂರಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 12.10ಕ್ಕೆ ಮೃತಪಟ್ಟಿದ್ದಾರೆ, ಈ ಮೂಲಕ ವಿಷ ಪ್ರಸಾದ ದುರಂತದಲ್ಲಿ ಸಾವಿನ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.