ಈ ವಿಚಾರಕ್ಕೆ ವಿಧಾನಸಭೆ ಕಲಾಪದಲ್ಲಿ ಇಂದು ಗದ್ದಲ ಎಬ್ಬಿಸಲು ಕಾಂಗ್ರೆಸ್ ನಿರ್ಧಾರ
ಸೋಮವಾರ, 2 ಮಾರ್ಚ್ 2020 (11:28 IST)
ಬೆಂಗಳೂರು : ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರವಾಗಿ ಇಂದಿನ ವಿಧಾನಸಭೆ ಕಲಾಪದಲ್ಲಿ ಗದ್ದಲ ಎಬ್ಬಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎಂಬುದಾಗಿ ತಿಳಿದುಬಂದಿದೆ.
ಸದನದಲ್ಲಿ ಯತ್ನಾಳ್ ಉಚ್ಚಾಟನೆಗೆ ಕಾಂಗ್ರೆಸ್ ಪಟ್ಟು ಹಿಡಿಯಲಿದ್ದು, ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ದೊರೆಸ್ವಾಮಿ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ಕ್ಷಮೆ ಕೇಳಲ್ಲ ಎಂದು ಯತ್ನಾಳ್ ಹೇಳಿರುವ ಹಿನ್ನಲೆಯಲ್ಲಿ ಕ್ಷಮೆ ಕೇಳುವವರೆಗೂ ಉಚ್ಚಾಟನೆಗೆ ಆಗ್ರಹಿಸಿ ಪಟ್ಟು ಹಿಡಿಯಲು ಕಾಂಗ್ರೆಸ್ ನಿರ್ಧರಿಸಿದ್ದು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಇಂದು ಸಿಎಂ ಬಿಎಸ್ ವೈ ಉತ್ತರ ನೀಡಲಿದ್ದಾರೆ ಎನ್ನಲಾಗಿದೆ.