ಕಾಂಗ್ರೆಸ್ ಕಚೇರಿಯ ಮುಂದೆ ಬಿಜೆಪಿ ನಾಯಕರಿಂದ ಪ್ರತಿಭಟನೆಗೆ ನಿರ್ಧಾರ

ಬುಧವಾರ, 27 ಡಿಸೆಂಬರ್ 2017 (11:21 IST)
ಬೆಂಗಳೂರು: ಒಂದು ಕಡೆ ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮಹದಾಯಿ ಹೋರಾಟಗಾರರು ಬಿಜೆಪಿ ಕಚೇರಿಯ ಬಳಿ ಪ್ರತಿಭಟನೆ ಮಾಡುತ್ತಿದ್ದರೆ, ಇನ್ನೊಂದು ಕಡೆ ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಕುತಂತ್ರ ಮಾಡಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಕಾಂಗ್ರೆಸ್ ಕಚೇರಿಯ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.


ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಕುತಂತ್ರ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಬಿಜೆಪಿಯ ಆರ್. ಅಶೋಕ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯ ಮುಂದೆ ಪ್ರತಿಭಟನೆ ಮಾಡುವ ನಿರ್ಧಾರ ಕೈಗೊಂಡಿದೆ.


ಈ ಹಿನ್ನಲೆಯಲ್ಲಿ ಕೆಪಿಸಿಸಿ ಕಚೇರಿಯ ಮುಂದೆ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. 150 ಕ್ಕೂ ಹೆಚ್ಚು ಪೊಲೀಸರನ್ನು ಅಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಚೇರಿಯ ಒಳಗೆ ಪ್ರವೇಶಿಸದಂತೆ ಬ್ಯಾರಿಕೇಡ್ ಹಾಕಿ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ