ಮೈಸೂರು ದಸರಾದ ಉಪಾಧ್ಯಕ್ಷ ಸ್ಥಾನಕ್ಕಾಗಿ ಮೈತ್ರಿ ಸರ್ಕಾರದಲ್ಲಿ ಬುಗಿಲೆದ್ದ ಭಿನ್ನಮತ

ಬುಧವಾರ, 10 ಅಕ್ಟೋಬರ್ 2018 (13:34 IST)
ಚಾಮರಾಜನಗರ : ಮೈಸೂರು ದಸರಾ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಇದೀಗ ಮೈತ್ರಿ ಸರ್ಕಾರದ ಕಾಂಗ್ರೆಸ್ ಹಾಗೂ ಜೆಡಿಎಸ್ ಸಚಿವರಿಬ್ಬರ  ನಡುವೆ ವಾಗ್ದಾಳಿ ನಡೆದಿದೆ.


ಮೈಸೂರು ದಸರಾದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿಶೇಷ ಸ್ಥಾನ ಮಾನ ನೀಡುವ ವಿಚಾರದಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರ ವಿರುದ್ಧ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ವಾಗ್ದಾಳಿ ನಡೆಸಿದ್ದಾರೆ.


ಈ ಬಗ್ಗೆ ಮಾತನಾಡಿದ ಸಚಿವ ಪುಟ್ಟರಂಗಶೆಟ್ಟಿ ಅವರು,’ ಪ್ರತಿ ದಸರಾದಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿಶೇಷ ಸ್ಥಾನ ಮಾಡ ನೀಡುವುದು ವಾಡಿಕೆ. ಆದರೆ ಜಿ.ಟಿ.ದೇವೇಗೌಡ ಅವರು ಯಾವುದೇ ವಾಡಿಕೆ ಉಳಿಸಿಲ್ಲ. ಎಲ್ಲವನ್ನೂ ನಾನೇ ಮಾಡುತ್ತೇನೆ ಎನ್ನುತ್ತಾರೆ. ಅವರ ದರ್ಬಾರ್ ದಸರಾದಲ್ಲಿ ನಡೆಯಲಿ. ನಾನು ಮೈಸೂರು ದಸರಾಗೆ ಬರಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ನಮ್ಮನ್ನ ಕರೆಯದೆ ತಮಗೆ ಇಷ್ಟ ಬಂದ ಹಾಗೆ ಮೈಸೂರು ದಸರಾ ಸಮಿತಿಗಳನ್ನು ಮಾಡಿಕೊಂಡರು. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಉಪಾಧ್ಯಕ್ಷ ಸ್ಥಾನ ನೀಡಬೇಕಿತ್ತು. ಆದರೆ ಸ್ಥಾನ ನೀಡುವುದಿರಲ್ಲಿ ಎಲ್ಲಿಯೂ ನನ್ನ ಹೆಸರನ್ನು ಪ್ರಕಟಿಸಿಲ್ಲ. ಇದೆಲ್ಲ ಆಗಿದ್ದು ಜಿ.ಟಿ.ದೇವೇಗೌಡ ಅವರಿಂದ ಎಂದು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ