ಈ ಜಿಲ್ಲೆಯಲ್ಲಿದೆ 300 ಹಾಸಿಗೆಯ ಕೊರೊನಾ ಆಸ್ಪತ್ರೆ

ಬುಧವಾರ, 1 ಏಪ್ರಿಲ್ 2020 (13:49 IST)
ಸರಕಾರಿ ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲು ಸರ್ಕಾರ ತಿರ್ಮಾನಿಸಿದೆ ಎಂದು ಆರೋಗ್ಯ ಸಚಿವ ಹೇಳಿದ್ದಾರೆ.

ಕೊಪ್ಪಳದಲ್ಲಿರುವ 300 ಹಾಸಿಗೆಯ ಈ ಜಿಲ್ಲಾ ಆಸ್ಪತ್ರೆ ಇನ್ನುಮುಂದೆ ಕೋವಿಡ್ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸಲಿದೆ ಎಂದು  ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಬದಲಿಸಲು ಯಾವುದೇ ಹಣ ಕಾಸಿನ ತೊಂದರೆ ಇಲ್ಲಾ. ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಬರುವ ರೋಗಿಗಳಿಗೆ ಪರ್ಯಾಯವಾಗಿ ವ್ಯವಸ್ಥೆ ಮಾಡಲಾಗುವುದು. ಕೊಪ್ಪಳ ಜಿಲ್ಲೆಯಲ್ಲಿರುವ 7 ತಾಲೂಕಾ ಕೇಂದ್ರಗಳಲ್ಲಿ ಕೋವಿಡ್ 19 ಚಿಕಿತ್ಸೆ ನೀಡಲು ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು  ಎಂದು ಸಚಿವರು ಹೇಳಿದ್ದಾರೆ.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ