ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಜಾರಿಗೊಳಿಸಿರುವ 'ಭಾನುವಾರದ ಲಾಕ್ ಡೌನ್' ಈ ಜಿಲ್ಲೆಯಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹಾವೇರಿಯಲ್ಲಿ ಅಂಗಡಿ- ಮಳಿಗೆಗಳು ಮುಚ್ಚಿದ್ದು, ಪ್ರಮುಖ ರಸ್ತೆ ಹಾಗೂ ವೃತ್ತಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ.
ಮಾಂಸದಂಗಡಿಗಳು, ATM ಕೇಂದ್ರಗಳು, ಹಾಲು, ಔಷಧ ಮಳಿಗೆಗಳು ಹಾಗೂ ಆಸ್ಪತ್ರೆಗಳು ಎಂದಿನಂತೆ ತೆರೆದಿವೆ.
ಸಾರಿಗೆ ಮತ್ತು ಖಾಸಗಿ ಬಸ್, ಆಟೊ, ಟ್ಯಾಕ್ಸಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ನಗರದ ಪ್ರಮುಖ ವೃತ್ತಗಳು ಜನರಿಲ್ಲದೆ ಭಣಗುಡುತ್ತಿವೆ. ಕೋವಿಡ್ ತುರ್ತು ಸೇವೆಯಲ್ಲಿ ತೊಡಗಿದ್ದ ಸಿಬ್ಬಂದಿ ವಾಹನಗಳನ್ನು ಹೊರತುಪಡಿಸಿ ಇತರೆ ವಾಹನಗಳಿಗೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.