ಐಕ್ಯತೆಗೆ ಧಕ್ಕೆ ತರಲು ಮತಾಂಧ ಶಕ್ತಿಗಳ ಪ್ರಯತ್ನ: ದೇವೇಗೌಡ
ಗುರುವಾರ, 26 ಮೇ 2022 (12:23 IST)
ದೇಶದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಧರ್ಮಗಳ ನಡುವಿನ ಸಾಮರಸ್ಯ ಹಾಳು ಮಾಡಲು, ದೇಶದ ಐಕ್ಯತೆಯನ್ನು ಕೆಡಿಸಲು ಕೆಲ ಮತಾಂಧ ಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಜಾನ್ ವಿರುದ್ಧ ನಡೆಯುತ್ತಿರುವ ಸುಪ್ರಭಾತ ಅಭಿಯಾನದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೂ ದೇವಾಲಯಗಳಲ್ಲಿ ಬೆಳಗಿನ ಜಾವ ಸುಪ್ರಭಾತ, ಮುಸ್ಲಿಮರ ಮಸೀದಿಗಳಲ್ಲಿ ಬೆಳಗಿನ ಜಾವ ಅಜಾನ್ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.
ಆಯಾ ಧರ್ಮದವರು ತಮ್ಮ ಆಚರಣೆಗಳನ್ನು ವಿಧಿವತ್ತಾಗಿ ಮಾಡುತ್ತಾ ಬಂದಿದ್ದಾರೆ. ಆದರೆ ದೇಶದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹಾಗೂ ದೇಶದ ಐಕ್ಯತೆಯನ್ನು ಹಾಳು ಮಾಡಲು ಕೆಲ ಮತಾಂಧಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.