ಸಚಿವ ಸಂಪುಟ ವಿಸ್ತರಣೆ ನಂತರ ಚುನಾವಣೆ ನಡೆಯಲಿದೆ

ಭಾನುವಾರ, 19 ಜನವರಿ 2020 (10:34 IST)
ಬಾಗಲಕೋಟೆ : ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ನೂರು ಸಲ ಬರಲಿ. ಆದ್ರೆ ರಾಜ್ಯಕ್ಕೆ ಕಲ್ಯಾಣವಾಗುವಂತಹ ಕೆಲಸ ಮಾಡಬೇಕಲ್ಲ. ಸಿಎಎ ಮೂಲಕ ಇವರು ಜನರ ಮಧ್ಯೆ ಗೋಡೆ ಕಟ್ಟುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಗೊಂದಲವಿಲ್ಲ. ಸಿದ್ದರಾಮಯ್ಯ ಡಿಕೆಶಿವಕುಮಾರ್ ತಮ್ಮ ತಮ್ಮ ಅಭಿಪ್ರಾಯ ಹೇಳ್ತಾರೆ. ಡಿಕೆ ಶಿವಕುಮಾರ್ ಅಧ್ಯಕ್ಷರಾದ್ರೆ ಯಾರಿಗೂ ಹಿನ್ನಡೆ ಯಲ್ಲ. ಹೈಕಮಾಂಡ್ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಬೇಕು ಎಂದು ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ನಂತರ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಬಿಎಸ್ ವೈ ಈಗಾಗಲೇ ರಾಜೀನಾಮೆ ಹಿಂಟ್ ಕೊಟ್ಟಿದ್ದಾರೆ. ಅವರ ಪಕ್ಷದವರ ೊತ್ತಡದಿಂದ ಹೀಗಾಗಿದೆ. ಸಂಪುಟ ವಿಸ್ತರಣೆಯ ನಂತರ ಬಿಜೆಪಿ ನಿಜಬಣ್ಣ ಬಯಲಾಗುತ್ತೆ ಎಂದು ಅವರು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ