ಭೂ ಕಬಳಿಕೆ ತಡೆಯಲು ವಿಶೇಷ ಕೋರ್ಟ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬುಧವಾರ, 31 ಆಗಸ್ಟ್ 2016 (12:16 IST)
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಭೂ ಒತ್ತುವರಿದಾರರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದು ಭೂ ಕಬಳಿಕೆಯನ್ನು ತಡೆಯಲು ವಿಶೇಷ ಕೋರ್ಟ್ ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಭೂ ಕಬಳಿಕೆ ತಡೆಯಲು ಆರಂಭಿಸಲಾದ ವಿಶೇಷ ಕೋರ್ಟ್ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು ನಗರವೊಂದರಲ್ಲಿಯೇ ಒಂದು ಲಕ್ಷಕ್ಕೂ ಹೆಚ್ಚು ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದರು.
 
ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಭೂ ಒತ್ತುವರಿದಾರರಿಗೆ ಸಿಂಹ ಸ್ವಪ್ನವಾಗಿದ್ದು, ಈಗಾಗಲೇ 6 ಸಾವಿರ ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಸಂಪೂರ್ಣ ಒತ್ತುವರಿ ಭೂಮಿಯನ್ನು ಸರಕಾರದ ವಶಕ್ಕೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
 
ಭೂ ಒತ್ತುವರಿದಾರರು ಯಾರೇ ಆಗಿರಲಿ ಎಷ್ಟೇ ಪ್ರಭಾವಿಗಳಾಗಿರಲಿ ಅವರ ವಿರುದ್ಧ ಕ್ರಮ ಖಚಿತ. ಇದರಲ್ಲಿ ಬಡವರು , ಶ್ರೀಮಂತರು, ಪ್ರಭಾವಿಗಳು ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ