ಜೆಡಿಎಸ್​ ಸಮಾವೇಶದಲ್ಲಿ ಕಣ್ಣೀರ ಧಾರೆ ಹರಿಸಿದ ದೇವೇಗೌಡರ ಕುಟುಂಬ

ಗುರುವಾರ, 14 ಮಾರ್ಚ್ 2019 (06:58 IST)
ಹಾಸನ : ನಿನ್ನೆ ನಡೆದ ಜೆಡಿಎಸ್​ ಸಮಾವೇಶವೊಂದರಲ್ಲಿ ಜೆಡಿಎಸ್​ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್​.ಡಿ. ದೇವೇಗೌಡರು ಕಣ್ಣೀರು ಹಾಕಿದ್ದಾರೆ.


ಜಿಲ್ಲೆಯ ಹೊಳೆನರಸೀಪುರದಲ್ಲಿ ಆಯೋಜಿಸಿದ್ದ ಜೆಡಿಎಸ್​ ಸಮಾವೇಶದಲ್ಲಿ ಎಚ್​.ಡಿ. ದೇವೇಗೌಡರು ಅಧಿಕೃತವಾಗಿ ಹಾಸನ ಕ್ಷೇತ್ರವನ್ನು ತಮ್ಮ ಮೊಮ್ಮಗ ಪ್ರಜ್ವಲ್​ ರೇವಣ್ಣ ಅವರಿಗೆ ಬಿಟ್ಟು ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಆ ವೇಳೆ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.


ದೇವೇಗೌಡರು ತಮ್ಮ ನಿರ್ಧಾರವನ್ನು ಘೋಷಣೆ ಮಾಡುತ್ತಿದ್ದ ಹಾಗೇ ಅವರ ಹಿಂದೆಯೇ ನಿಂತಿದ್ದ ಮೊಮ್ಮಗ ಪ್ರಜ್ವಲ್​ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಇದನ್ನು ನೋಡಿ ವೇದಿಕೆಯ ಹಿಂದಿನ ಸಾಲಿನಲ್ಲಿದ್ದ ಎಚ್​.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಕಣ್ಣೀರು ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ