ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಶನಿವಾರ, 2 ಸೆಪ್ಟಂಬರ್ 2023 (16:20 IST)
ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೋರಯ್ಯರ ಪುತ್ರ H.B.ಶಂಕರಯ್ಯ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬೇಸಾಯ ನಂಬಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದ ಶಂಕರಯ್ಯ ಕುಟುಂಬಕ್ಕೆ 20 ಗುಂಟೆ ಜಮೀನಿತ್ತು. ಆದರೆ ಇವರ ಮಗ ಕಿಡ್ನಿ ವೈಫಲ್ಯಕ್ಕೀಡಾಗಿ ಅನಾರೋಗ್ಯಕ್ಕೆ ಒಳಗಾಗಿದ್ದ. ಮಗನ ಚಿಕಿತ್ಸೆ ಮತ್ತು ಜೀವನ ನಿರ್ವಹಣೆಯ ಹೊಣೆ ಹೊತ್ತಿದ್ದ ಇವರಿಗೆ ಬೇಸಾಯದಿಂದ ಆದಾಯ ಬಾರದ ಹಿನ್ನೆಲೆಯಲ್ಲಿ ಸಾಲದ ಮೊರೆ ಹೋಗಿದ್ರು. ಪತ್ನಿ ಹೆಸರಿನಲ್ಲಿ ಧರ್ಮಸ್ಥಳ ಯೋಜನೆಯಲ್ಲಿ 1.50 ಲಕ್ಷ, ಬ್ಯಾಂಕಿನಲ್ಲಿ 5 ಲಕ್ಷ ಮತ್ತು ಖಾಸಗಿಯಾಗಿ 5 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ಮರುಪಾವತಿಸುವ ಚಿಂತೆಯಲ್ಲಿದ್ದ ರೈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮದ್ದೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ