ಬೆಂಗಳೂರು : ಇಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಡಿ.12ರಂದು ನಡೆದಿದ್ದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು,
ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯುತ್ತದೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಜಿದ್ದಾಜಿದ್ದಿನ ಫೈಟ್ನಲ್ಲಿ ಗೆಲ್ಲುವರು ಯಾರು ಎಂಬ ಕುತೂಹಲ ಕೆರಳಿಸಿದೆ.
ಇಂದು (ಡಿಸೆಂಬರ್ 15) ಫಲಿತಾಂಶ ಹೊರಬೀಳಲಿದ್ದು, ರಾಜ್ಯ ಒಕ್ಕಲಿಗ ಸಂಘದ ಆಡಳಿತ ಚುಕ್ಕಾಣಿ ಯಾರ ಕೈ ಸೇರಲಿದೆ ಅಂತ ಕಾದು ನೋಡಬೇಕಿದೆ. ಏಕ ಕಾಲದಲ್ಲಿ ಸುಮಾರು 389 ಬೂತ್ಗಳ ಮತ ಎಣಿಕೆ ನಡೆಯುತ್ತದೆ. ಮತ ಎಣಿಕೆಗೆ 5 ಸಾವಿರ ಸಿಬ್ಬಂದಿ ನೇಮಕ ಮಾಡಲಾಗಿದೆ.
ಭಾರಿ ಕುತೂಹಲ ಹುಟ್ಟಿಸಿರುವ ಒಕ್ಕಲಿಗ ಸಂಘದ ಚುನಾವಣೆ 5 ವರ್ಷಗಳಿಗೊಮ್ಮೆ ನಡೆಯುತ್ತೆ. ಮೂರು ವರ್ಷಗಳಿಂದ ಅಧ್ಯಕ್ಷರಿಲ್ಲದೇ ಆಡಳಿತಾಧಿಕಾರಿ ನೇತೃತ್ವದಲ್ಲಿ ಒಕ್ಕಲಿಗ ಸಂಘ ಮುಂದುವರೆದಿತ್ತು. ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಸ್ಥಾನಕ್ಕೆ ಚುನಾವಣೆ ನಡೆದಿದೆ.