ಮತ್ತಿನಲ್ಲಿ ಮಗಳ ಎದೆ ಕಚ್ಚಿದ ತಂದೆ!
ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಗಳ ಮೇಲೆ ವಿಕೃತಿ ಮೆರೆದ ತಂದೆ ಕಾಕಾತಿ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಆರ್ಎಂಸಿ ವೈದ್ಯನಾಗಿ ಕೆಲಸ ಮಾಡುತ್ತಿದ್ದಾನೆ.
ಇತ್ತ ಖಾಸಗಿ ಆಸ್ಪತ್ರೆಯಲ್ಲಿ ಅಟೆಂಡರ್ ಆಗಿ ಮಗುವಿನ ತಾಯಿ ಸೇವೆ ಸಲ್ಲಿಸುತ್ತಿದ್ದು ತಾಯಿ ಕೆಲಸಕ್ಕೆ ತೆರಳಿದ ವೇಳೆ ಕುಡಿದ ನಶೆಯಲ್ಲಿ ತಂದೆ ವಿಕೃತಿ ಮೆರೆದಿದ್ದಾನೆ.
ಸದ್ಯ ಆರೋಪಿ ತಂದೆಯನ್ನು ಕಾಕತಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರಿದಿದೆ.