ಶುಲ್ಕ ರಿಯಾಯಿತಿ ಮಾಡುವಂತೆ ಶಾಲಾ ಆಡಳಿತ ಮಂಡಳಿಗೆ ಮನವಿ ಮಾಡಿದ ಖಾಸಗಿ ಶಾಲೆಗಳ ಒಕ್ಕೂಟ
ಬುಧವಾರ, 6 ಜನವರಿ 2021 (11:54 IST)
ಬೆಂಗಳೂರು :ಶಾಲಾ ಶುಲ್ಕ ರಿಯಾಯಿತಿಗೆ ಖಾಸಗಿ ಶಾಲೆಗಳ ಒಕ್ಕೂಟ ಮುಂದಾಗಿದ್ದು, ಸಂಪೂರ್ಣ ಶುಲ್ಕ ಪಾವತಿಗೆ ಪೋಷಕರಿಗೆ ಒತ್ತಡ ಹೇರಬೇಡಿ ಎಂದು ಖಾಸಗಿ ಶಾಲೆಗಳಿಗೆ ತಿಳಿಸಿದೆ.
ಈ ವರ್ಷ ಖರ್ಚು ವೆಚ್ಚದ ಆಧಾರದಲ್ಲಿ ಶುಲ್ಕ ನಿಗದಿ ಮಾಡಿ. ಬಲವಂತವಾಗಿ ಶುಲ್ಕ ಪಾವತಿ ಮಾಡಿ ಎನ್ನುವುದು ಸರಿಯಲ್ಲ. ಮೊದಲಿನಂತೆ ಸಂಪೂರ್ಣವಾಗಿ ಶುಲ್ಕ ಪಡೆಯುವುದು ಬೇಡ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಸದಸ್ಯ ಶಾಲಾ ಆಡಳಿತ ಮಂಡಳಿಗಳಿಗೆ ಮನವಿ ಮಾಡಿದ್ದಾರೆ.
ಹಾಗೇ ಶಾಲಾ ಶುಲ್ಕ ರಿಯಾಯಿತಿಗೆ ಮುಂದಾಗಿರುವ ಕ್ಯಾಮ್ಸ್ ನಡೆಗೆ ಸಚಿವ ಎಸ್. ಸುರೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.