ಉತ್ಸವ ಆಚರಣೆಗೂ ಸರ್ಕಾರಕ್ಕೂ ಸಂಬಂಧವಿಲ್ಲ- ಪಾಟೀಲ್

ಬುಧವಾರ, 14 ಫೆಬ್ರವರಿ 2018 (21:25 IST)

ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಬಹುಮನಿ ಸುಲ್ತಾನ್ ಉತ್ಸವ ಆಚರಣೆಯನ್ನು ಸರ್ಕಾರದಿಂದ ಆಚರಣೆ ಮಾಡುತ್ತಿಲ್ಲ. ಕೆಲ ಸಂಘಟನೆಗಳೊಂದಿಗೆ ಸೇರಿಕೊಂಡು ಮಾಡಲಾಗುತ್ತಿದೆ ಎಂದಿದ್ದಾರೆ.

ಉತ್ಸವದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿಲ್ಲ. ಬೆಂಗಳೂರಿಗೆ ಹೋದ ನಂತರ ಮಾಹಿತಿ ನೀಡುತ್ತೇನೆ. ರಾಜಕೀಯ ದುರುದ್ದೇಶದಿಂದ ಕೆಲವರು ವಿರೋಧ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ