ಎರಡು ಗುಂಪುಗಳ ನಡುವೆ ಶುರುವಾದ ಜಗಳ ಚಿನ್ಮಯಾನಂದ ಸ್ವಾಮೀಜಿ ಹತ್ಯೆಯಲ್ಲಿ ಅಂತ್ಯ
ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಜಾಗದಲ್ಲಿ ಆಶ್ರಮ ಇದ್ದು ಹಲವು ವರ್ಷಗಳಿಂದ ಜಾಗದ ಕುರಿತಂತೆ ವಿವಾದ ನಡೆಯುತ್ತಿದೆ. ಇಂದು ಬೆಳಿಗ್ಗೆ ಕೋರ್ಟ್ಗೆ ದಾಖಲೆ ಸಹಿತ ಹೋಗುವ ವೇಳೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಚಿನ್ಮಯಾನಂದ ಅವರನ್ನು ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ.
ಕೊಲೆ ಪ್ರಕರಣ ಸಂಬಂಧ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಅರುಣ್ ಎಂಬುವವರನ್ನು ಮಾಲೂರು ಪೊಲೀಸ್ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.