ಈ ಜಿಲ್ಲೆಗೆ ಮೊದಲ ಸ್ಥಾನ - ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆ
ಮಂಗಳವಾರ, 7 ಜನವರಿ 2020 (15:59 IST)
ಕೇಂದ್ರ ಪುರಸ್ಕೃತ ಯೋಜನೆಗಳಾದ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಲ್ಲಿ ರಾಜ್ಯದ ಈ ಜಿಲ್ಲೆ ಅಗ್ರಸ್ಥಾನದಲ್ಲಿದೆ.
ಧಾರವಾಡ ಜಿಲ್ಲೆ ರಾಜ್ಯದಲ್ಲಿ ಅಗ್ರಸ್ಥಾನದಲ್ಲಿದೆ. ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ಜಿಲ್ಲೆಗೆ 149 ಕೋಟಿ ರೂ.ದೊರೆತಿದೆ. ಜಿಲ್ಲಾಧಿಕಾರಿ ಮತ್ತು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮುತುವರ್ಜಿಯಿಂದ ಜಿಲ್ಲೆಯ ಪ್ರಗತಿ ಸಂತಸಕರ ರೀತಿಯಲ್ಲಿ ಸಾಗಿದೆ.
ಹೀಗಂತ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಇಲಾಖೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ಶೇ.80 ರಷ್ಟು ರೈತರ ನೋಂದಣಿ ಮಾಡಲಾಗಿದೆ. ಬೆಳೆವಿಮೆ, ಬೆಳೆ ಪರಿಹಾರದ ಹಣ ದೊಡ್ಡ ಪ್ರಮಾಣದಲ್ಲಿ ರೈತರ ಖಾತೆಗಳಿಗೆ ಜಮೆಯಾಗಿದೆ. ಆರೋಗ್ಯ ಯೋಜನೆಗಳಡಿ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದರು.