ಐದು ವರ್ಷ ಜೆಡಿಎಸ್ ನವರೇ ಸಿಎಂ: ದಿನೇಶ್ ಗುಂಡೂರಾವ್ ಸ್ಪಷ್ಟನೆ

ಮಂಗಳವಾರ, 28 ಆಗಸ್ಟ್ 2018 (17:44 IST)
ಸಿದ್ದರಾಮಯ್ಯನವರ ಹೇಳಿಕೆಯನ್ನು ಬೇರೆ ರೀತಿ ಅರ್ಥೈಸಲಾಗಿದೆ. ಆದರೆ ಸಮ್ಮಿಶ್ರ ಸರ್ಕಾರದ ಒಪ್ಪಂದದಂತೆ ಐದು ವರ್ಷಗಳ ಕಾಲ ಹೆಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಚಿತ್ರದುರ್ಗದಲ್ಲಿ  ನಗರಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ರೋಡ್ ಶೋನಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ಮಟ್ಟದ ನಾಯಕರು ಹಾಗು ಜೆಡಿಎಸ್ ನಾಯಕರು‌ ಕುಳಿತು ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬರಲು ತೀರ್ಮಾನಿಸಿದ್ದಾರೆ. ಅದರಂತೆ ಐದು ವರ್ಷಗಳ ಕಾಲ ಜೆಡಿಎಸ್ ನವರೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ. ಆದರೆ ಬಿಜೆಪಿಯವರು ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದು, ಯಾರ ಜೊತೆ ಬೇಕಾದರೂ ಸೇರಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಅಜೆಂಡಾ ಕೂಡ ಅದೇ ಆಗಿದೆ. ಅದನ್ನು ಬಿಟ್ಟು ರಾಜ್ಯಕ್ಕೆ ಒಳಿತಾಗುವ ಯಾವುದೇ ರೀತಿಯ ಹೋರಾಟವನ್ನು ಬಿಜೆಪಿಯವರು ಮಾಡುತ್ತಿಲ್ಲ.

ಬಿಎಸ್ವೈಗೆ ವಯಸ್ಸಾಗಿರೋದ್ರಿಂದ ಹೇಗಾದರೂ ಮಾಡಿ ಈ ಅವಧಿಯಲ್ಲೇ‌ ಅಧಿಕಾರ ಹಿಡಿಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರ ಪ್ರಯತ್ನ ಫಲಿಸುವುದಿಲ್ಲ ಎಂದು ಬಿಜೆಪಿ ವಿರುದ್ದ ಹರಿಹಾಯ್ದರು.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ