ಉಪ್ಪಿನ ಸತ್ಯಾಗ್ರಹ ನಡೆದ ಸ್ಥಳಕ್ಕೆ ಮಾಜಿ ಶಾಸಕ ಭೇಟಿ

ಮಂಗಳವಾರ, 2 ಅಕ್ಟೋಬರ್ 2018 (19:00 IST)
ಮಹಾತ್ಮ ಗಾಂಧಿ ಜಯಂತಿ ದಿನವಾದ ಇಂದು  ಗಾಂಧೀಜಿ ಯವರು ಗುಜರಾತ್ ನ ದಾಂಡಿಯಲ್ಲಿ  ನಡೆಸಿದ ಉಪ್ಪಿನ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ರಾಜ್ಯದ ಮಾಜಿ ಶಾಸಕರೊಬ್ಬರು ನಮನ ಸಲ್ಲಿಸಿದ್ದಾರೆ.

ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ್ದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಾಬರಮತಿ ಆಶ್ರಮದಿಂದ ಸಮುದ್ರ ತಟದಲ್ಲಿರುವ ದಾಂಡಿಯವರೆಗಿನ 240 ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.

ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು 1930ನೇ ಇಸವಿಯ ಮಾರ್ಚ್ 12 ರಿಂದ ಏಪ್ರಿಲ್ 6 ರವರಗೆ ನಡೆಯಿತು.         



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ