ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬುಧವಾರ, 6 ಮಾರ್ಚ್ 2019 (06:03 IST)
ರಾಯಚೂರು : ಬಹಿರ್ದೆಸೆಗೆ ತೆರಳಿದ್ದ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ  ಜಿಲ್ಲೆಯ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಯಮನಪ್ಪ (20), ರಂಗಪ್ಪ (21) ಮತ್ತು ಮಂಜು (20) ಅತ್ಯಾಚಾರ ಎಸಗಿದ ಕಾಮುಕರು. ಸಂತ್ರಸ್ತ ಬಾಲಕಿಯ ಗ್ರಾಮದವರಾದ ಈ ಮೂವರು ಬಾಲಕಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಆಕೆಯನ್ನು ಹಿಂಬಾಲಿಸಿ ಅತ್ಯಾಚಾರ ಎಸಗಿದ್ದಾರೆ.


ಘಟನೆಯ ಬಳಿಕ ಬಾಲಕಿ ಪೋಷಕರ ಬಳಿ ಈ ವಿಚಾರ ತಿಳಿಸಿದ್ದು, ಪೋಷಕರು ಸಿರವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೇ ಹಾಜರುಪಡಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ