ಮುಂದಿನ 48 ಘಂಟೆ ಕರಾವಳಿಯ ಎಲ್ಲ ಜಿಲ್ಲೆಗಳ ಭಾರೀ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಕಲಬುರ್ಗಿ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಬಿರುಗಾಳಿಯ ವೇಗವು ಘಂಟೆಗೆ 40-50 ಕಿ.ಮೀ. ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.