ಬೆಂಗಳೂರು : ಗ್ಯಾರಂಟಿ ಹೊಡೆತದ ಕಾರಣ ಕಾಂಗ್ರೆಸ್ ಸರ್ಕಾರ ಶಾಲಾ ಮಕ್ಕಳ ಹಣಕ್ಕೂ ಕತ್ತರಿ ಹಾಕಿದೆ. ಶೂ, ಸಾಕ್ಸ್ ಖರೀದಿ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ.
ಸರ್ಕಾರ ನೀಡಬೇಕಿದ್ದ ಒಟ್ಟು ಅನುದಾನದಲ್ಲಿ ಬರೋಬ್ಬರಿ 7 ಕೋಟಿ ಹಣ ಕಡಿತ ಮಾಡಿ ಶೂ, ಸಾಕ್ಸ್ ಖರೀದಿಗೆ ಆದೇಶ ಹೊರಡಿಸಿದೆ. 2022-23ನೇ ಸಾಲಿನಲ್ಲಿ ಬಿಜೆಪಿ ಸರ್ಕಾರ 1 ರಿಂದ 10 ನೇ ತರಗತಿ ಮಕ್ಕಳಿಗೆ 1 ಜೊತೆ ಶೂ, ಎರಡು ಜೊತೆ ಸಾಕ್ಸ್ ಖರೀದಿಗೆ 132 ಕೋಟಿ ಹಣ ಬಿಡುಗಡೆ ಮಾಡಿತ್ತು.
2023-24 ನೇ ಸಾಲಿಗೆ 125 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಅಂದರೆ 7 ಕೋಟಿ ಹಣ ಕಡಿತ ಮಾಡಿ ಶಾಲೆಗಳಿಗೆ ಶೂ, ಸಾಕ್ಸ್ ಖರೀದಿ ಮಾಡುವಂತೆ ಸುತ್ತೋಲೆ ಹೊರಡಿಸಿದೆ.
ಬಿಜೆಪಿ ಅವಧಿಯಲ್ಲಿ ಶೂಗೆ ನಿಗದಿ ಮಾಡಿದ್ದ ದರವನ್ನೇ ಈ ವರ್ಷವೂ ಸರ್ಕಾರ ಫಿಕ್ಸ್ ಮಾಡಿದೆ. ಕಳೆದ ವರ್ಷದ ರೇಟ್ನಲ್ಲಿಯೇ ಶೂ, ಸಾಕ್ಸ್ ಖರೀದಿ ಮಾಡುವಂತೆ ಶಾಲೆಗಳಿಗೆ ಸೂಚನೆ ನೀಡಿದೆ. 2019-20ನೇ ಸಾಲಿನಲ್ಲಿ ಇದ್ದ ದರದಲ್ಲೇ 2023-24ನೇ ಸಾಲಿಗೂ ಶೂ ಖರೀದಿಗೆ ಸರ್ಕಾರದ ಆದೇಶಿಸಿದೆ.