ಆದೇಶ ಧಿಕ್ಕರಿಸುವ ಎದೆಗಾರಿಕೆ ಸರ್ಕಾರಕ್ಕಿಲ್ಲ

ಗುರುವಾರ, 12 ಅಕ್ಟೋಬರ್ 2023 (15:41 IST)
ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆದಿದ್ದು, ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.
 
ಈ ಕುರಿತು ಮಾಜಿ ಸಿಎಂ ಕುಮಾರ ಸ್ವಾಮಿ ಕಿಡಿಕಾರಿದ್ದಾರೆ.. ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. CWRC ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು. ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ ಅಂತಾ ಟ್ವೀಟ್​​ ಮೂಲಕ ಕಿಡಿಕಾರಿದ್ದಾರೆ..

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ