ದೇಣಿಗೆ ನೀಡುವ ಪತ್ರವನ್ನ ಸಿಎಂಗೆ ನೀಡಿದ ಸರ್ಕಾರಿ ನೌಕರರು
ರಾಜ್ಯ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಗೆ ತಮ್ಮ ಒಂದು ದಿನದ ಸಂಬಳ ನೀಡಿ, ಸರ್ಕಾರಕ್ಕೆ 100 ಕೋಟಿ ರೂ. ದೇಣಿಗೆ ನೀಡುವ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯವರಿಗೆ ನೀಡಿದರು. ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವ ಪ್ರಭುಚೌಹ್ವಾಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಜರಿದ್ದರು.