ಆದಿವಾಸಿಗಳಿಗೆ ಪುನರ್‌ವಸತಿ ಕಲ್ಪಿಸಲು ಸರಕಾರ ಬದ್ಧ: ಸಚಿವ ಅಂಜನೇಯ

ಶುಕ್ರವಾರ, 23 ಡಿಸೆಂಬರ್ 2016 (10:57 IST)
ಭೂಮಿ ಹಾಗೂ ವಸತಿಗಾಗಿ ದಿಡ್ಡಿಹಳ್ಳಿಯಲ್ಲಿ ನಡೆದ ಗಿರಿಜನರ ಪ್ರತಿಭಟನೆ ಹಿನ್ನೆಲೆಯಲ್ಲಿ ಆದಿವಾಸಿಗಳಿಗೆ ಪುನರ್‌ವಸತಿ ಕಲ್ಪಿಸಿಕೊಡುವಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಭರವಸೆ ನೀಡಿದ್ದಾರೆ.
 
ಮಡಿಕೇರಿ ಜಿಲ್ಲೆಯ ಕೊಡಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಿರಿಜನ ಹಾಗೂ ಆದಿವಾಸಿಗಳಿಗೆ ಜೀವನ ಕಲ್ಪಿಸಿಕೊಡುವುದು ನಮ್ಮ ಕರ್ತವ್ಯ ಆದಿವಾಸಿಗಳಿಗೆ ಸೌಲಭ್ಯ ಮಾಡಿಕೊಡಲು ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
 
ಕಾಡಿನ ಮಕ್ಕಳ ಸಮಸ್ಯೆಗಳನ್ನು ಆಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ರಾಜ್ಯದ ಬೇರೆ ಯಾವ ಪ್ರದೇಶದಲ್ಲಿಯೂ ಇಂತಹ ಸಮಸ್ಯೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ತಿಳಿಸಿದರು.
 
ಆಶ್ರಯ ಕಳೆದುಕೊಂಡು ಬೀದಿಗೆ ಬಿದ್ದಿರುವ 577 ಆದಿವಾಸಿ ಕುಟುಂಬಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕುಟುಂಬಗಳಿಗೆ ವಸತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ