ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ಸರಕಾರ ವಿಫಲ: ದೇವೇಗೌಡ

ಶನಿವಾರ, 4 ಮಾರ್ಚ್ 2017 (14:26 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
 
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ವಿವಿಧ ಕಾಮಗಾರಿಗಳಿಗೆ 650 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಆದರೆ, ಜಿಲ್ಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ ಎಂದರು.
 
ಒಂದು ವೇಳೆ, ಅಧಿಕಾರಿಗಳು ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ವಿಫಲವಾದಲ್ಲಿ ಸಿಎಂ ಮನೆಯ ಮುಂದೆ ಧರಣಿ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾಗಿ ತಿಳಿಸಿದ್ದಾರೆ.
 
ಜಿಲ್ಲೆಯಲ್ಲಿ ಈಗಾಗಲೇ ನೀರಿನ ಅಭಾವ ಕಾಡುತ್ತಿದೆ. ತ್ವರಿತಗತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
 
ಬೆಂಗಳೂರು ನಗರದಲ್ಲಿ ಮತ್ತೊಂದು ವಿಮಾನ ನಿಲ್ದಾಣ ಮಾಡುವ ಬದಲಿಗೆ ಎಚ್‌ಎಎಲ್ ವಿಮಾನ ನಿಲ್ದಾಣ ಪುನಾರಂಭ ಮಾಡುವುದು ಸೂಕ್ತ. ಈ ಕುರಿತಂತೆ ಕೇಂದ್ರ ವಿಮಾನಯಾನ ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ