ಬಸ್ ದರ ಏರಿಕೆ ಬೆನ್ನಲ್ಲೇ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆಯ ಶಾಕ್

Sampriya

ಶುಕ್ರವಾರ, 17 ಜನವರಿ 2025 (16:16 IST)
Photo Courtesy X
ಬೆಂಗಳೂರು: ಹೊಸ ವರ್ಷದಲ್ಲಿ ಬಸ್ ದರ ಏರಿಕೆಯ ಶಾಕ್ ನೀಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರು ಮೆಟ್ರೊ ರೈಲ್‌ ಕಾರ್ಪೋರೇಶನ್ ಲಿಮಿಟೆಡ್ ದರ ಏರಿಕೆಗೆ ಅಸ್ತು ನೀಡಿದೆ. ಇದರಿಂದ ಬಸ್ ದರ ಏರಿಕೆಯಿಂದ ಸುಧಾರಿಸಿಕೊಳ್ಳುತ್ತಿರುವ  ಪ್ರಯಾಣಿಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದೆ.

ಇಂದು ನಡೆದ ಸಭೆಯಲ್ಲಿ ಬೆಂಗಳೂರು ಮೆಟ್ರೊ ರೈಲ್‌ ಕಾರ್ಪೊರೇಶನ್‌ ಲಿಮಿಟೆಡ್ ದರ ಏರಿಕೆಗೆ ಅಸ್ತು ಎಂದಿದೆ ಎಂದು ತಿಳಿದುಬಂದಿದೆ.

ಮೆಟ್ರೋ ದರ ಪರಿಷ್ಕರಣೆ ಪ್ರಕ್ರಿಯೆ ಈ ಸಂಬಂಧ ಬಿಎಂಆರ್‌ಸಿಎಲ್ ಅಧಿಕಾರಿಗಳು ಮತ್ತು ದರ ಏರಿಕೆ ಸಮಿತಿಯ ಸದಸ್ಯರ ಜೊತೆ ಹೈವೊಲ್ಟೇಜ್ ಸಭೆ ಇಂದು ನಡೆಯಿತು. ಸಭೆಯಲ್ಲಿ ದರ ಏರಿಕೆ, ಜೊತೆಗೆ ಪರಿಷ್ಕೃತ ದರ ನಿಗದಿ ದಿನಾಂಕ ಕೂಡ ಫೈನಲ್ ಮಾಡಲಾಗಿದೆ. ಶನಿವಾರ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಬಿಎಂಆರ್‌ಸಿಎಲ್‌ ದರ ಏರಿಕೆ ವಿವರವನ್ನು ಪ್ರಕಟಿಸಲಿದೆ.

ಕಳೆದ 8 ವರ್ಷದಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಿರಲಿಲ್ಲ. ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಿದ್ದ ಸಮಿತಿ ಸಿಂಗಾಪುರ, ಹಾಂಕಾಂಗ್, ದೆಹಲಿಗೆ ತೆರಳಿ ಅಲ್ಲಿನ ಮೆಟ್ರೋ ದರ ಪರಿಷ್ಕರಣೆ ಕ್ರಮ, ದರ ಹೆಚ್ಚಳವನ್ನು ಅಧ್ಯಯನ ಮಾಡಿ ದರ ಪರಿಷ್ಕರಣೆ ವರದಿ ಸಿದ್ಧಪಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ