ಜೈನ ಮುನಿಗಳ ಹತ್ಯೆ ಪ್ರಕರಣದ ಹಿಂದೆ ಐಸೀಸ್ ಚಿತಾವಣೆ ಇದೆ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಸಿದ್ದು ಸವದಿ ಆರೋಪ ಮಾಡಿದ್ದಾರೆ.ಚಿತ್ರಹಿಂಸೆ ಮಾಡಿ ಕರೆಂಟ್ ಶಾಕ್ ಕೊಟ್ಡು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ.ಇನ್ನು ಭಯಾನಕ ಘಟನೆ ಭವಿಷ್ಯದಲ್ಲಿ ಕಾಣುವ ಆತಂಕ ಇದೆ.ಇದರ ಹಿಂದೆ ಐಸೀಸ್ ಉಗ್ರರ ಚಿತಾವಣೆ ಇದೆ.ಆದರೆ ಸರ್ಕಾರದ ನಡೆ ಸಂಶಯಾಸ್ಪದವಾಗಿದೆ .ಸರ್ವ ಸಂಗತ್ಯಾಗ ಮಾಡಿದ ಮುನಿಗಳ ಹತ್ಯೆಯ ಹಿಂದೆ ಪಿತೂರಿ ಇದೆ ಎಂದು ಸಿದ್ದು ಸವದಿ ಹೇಳಿದ್ದಾರೆ