ಸರ್ಕಾರವೇ ತಿವಾರಿಗೆ ಸೇರಿದ ಕಡತ, ದಾಖಲೆ ಸುಟ್ಟುಹಾಕಿದೆ: ಶೋಭಾ ಕರಂದ್ಲಾಜೆ
ಬುಧವಾರ, 28 ಜೂನ್ 2017 (17:19 IST)
ದಿವಂಗತ ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರಿಗೆ ಸೇರಿದ ಕಡತ, ದಾಖಲೆಗಳನ್ನು ಸರ್ಕಾರವೇ ಸುಟ್ಟು ಹಾಕಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.
ಸಿಬಿಐ ತನಿಖೆಗಾಗಿ ರಾಜ್ಯಕ್ಕೆ ಆಗಮಿಸುವ ಮುನ್ನವೇ ಸರಕಾರವೇ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಐಎಎಸ್ ಅಧಿಕಾರಿ ತಿವಾರಿ ಅವರ ಕಡತ, ದಾಖಲೆಗಳನ್ನು ಸುಟ್ಟುಹಾಕಿ ಸಾಕ್ಷ್ಯಗಳನ್ನು ನಾಶ ಮಾಡಿದೆ ಎಂದು ಆರೋಪಿಸಿದ್ದಾರೆ.
ಆಹಾರ ಮತ್ತು ಸರಬರಾಜು ಇಲಾಖೆಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎನ್ನುವ ಆರೋಪಗಳ ಮಧ್ಯೆಯೇ ಅನುರಾಗ್ ತಿವಾರಿ ಲಕ್ನೋದಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದರು.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ ಅನುರಾಗ್ ತಿವಾರಿ ನಿಗೂಢ ಸಾವಿನ ಕುರಿತಂತೆ ಸಿಬಿಐ ತನಿಖೆಗೆ ಆದೇಶಿಸಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.