ಈ ಬಾರಿ ನಡೆಯುವ ಅಧಿವೇಶನದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ

ಭಾನುವಾರ, 6 ಅಕ್ಟೋಬರ್ 2019 (08:29 IST)
ಬೆಂಗಳೂರು: ವಿಧಾನಸೌಧದಲ್ಲಿ ನಡೆಯುವ ಅಧಿವೇಶನದಲ್ಲಿ ದೃಶ್ಯ ಮಾಧ್ಯಮಕ್ಕೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.




ವಿಧಾನಸೌಧದಲ್ಲಿ ಇದೇ ಅಕ್ಟೋಬರ್ 10ರಿಂದ 3 ದಿನ ಅಧಿವೇಶನ ನಡೆಯಲಿದ್ದು, ಸದನದಲ್ಲಿ ಮಾಡುವ ತಪ್ಪುಗಳನ್ನು ಮಾಧ್ಯಮಗಳು ತೋರಿಸುವ ಭಯದಿಂದ ಮಾಧ್ಯಮಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.


ಸರ್ಕಾರದ ಈ ಚಿಂತನೆಯ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬಹಳಷ್ಟು ಮಾಧ್ಯಮಗಳು ಬಿಜೆಪಿ ಪರವಾಗಿ ಕೆಲಸ ಮಾಡಿದ್ದವು. ಆ ಕಾರಣದಿಂದ ನಿಷೇಧ ಹೇರಲು ಹೊರಟಿದ್ದಾರೆ. ನಮ್ಮ ಸರ್ಕಾರ ಇದ್ದಾಗ ನಿರ್ಬಂಧ ಹೇರಲು ಚಿಂತಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ