ಖಾಸಗಿ ಆಸ್ಪತ್ರೆಗಳಿಗೆ ಬಿಗ್ ಶಾಕ್ ನೀಡಿದ ಸರಕಾರ

ಶುಕ್ರವಾರ, 17 ಜುಲೈ 2020 (21:13 IST)
ರಾಜ್ಯದ ಕೆಲವು ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಸರಕಾರ ಮುಂದಾಗಿದೆ.

ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ -19 ಸೋಂಕಿತರಿಗೆ ಶೇ.  50 ಬೆಡ್ ಗಳನ್ನ ಮೀಸಲಿಡಲು ಸೂಚನೆ ನೀಡಲಾಗಿತ್ತು. ಆದರೆ ಕೆಲವು ಖಾಸಗಿ ಆಸ್ಪತ್ರೆಗಳು ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ರಾಜ್ಯ ಸರ್ಕಾರದ ಒಡಂಬಡಿಕೆಯ ಪ್ರಕಾರ ಖಾಸಗಿ ಆಸ್ಪತ್ರೆಗಳು ಶೇ. 50 ರಷ್ಟು ಬೆಡ್​ಗಳನ್ನ ಕೋವಿಡ್ ಸೋಂಕಿತರಿಗೆ ಮೀಸಲಿರಿಸಬೇಕೆಂಬ ಆದೇಶವಿದೆ. ಹಲವು ಖಾಸಗಿ ಆಸ್ಪತ್ರೆಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿವೆ. ಕೆಲ ಖಾಸಗಿ ಆಸ್ಪತ್ರೆಗಳು ಪಾಲಿಸುತ್ತಿಲ್ಲ.‌ ಹೀಗಾಗಿ ಅಂತಹ ಖಾಸಗಿ ಆಸ್ಪತ್ರೆಗಳನ್ನ ಗುರುತಿಸಿ ಅವುಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಅಂದಾಜು 2 ಲಕ್ಷಕ್ಕೂ ಅಧಿಕ ಆ್ಯಂಟಿಜೆನ್ ಕಿಟ್​ಗಳನ್ನ ಖರೀದಿಸಲಿದೆ. ಈಗಾಗಲೇ 1 ‌ಲಕ್ಷ ಕಿಟ್​ಗಳನ್ನು ಖರೀದಿಸಲಾಗಿದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ