ಜುಲೈ ಅಂತ್ಯಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ಎಂದ ಸರಕಾರ

ಶನಿವಾರ, 6 ಜೂನ್ 2020 (14:25 IST)
ಜೂನ್ 25 ರಿಂದ ಜುಲೈ 4 ವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ ಅಂತ್ಯ ಇಲ್ಲವೆ ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುತ್ತದೆ.

ಹೀಗಂತ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಹೈಕೋರ್ಟ್ ನಿರ್ದೇಶನದಂತೆ ಮಕ್ಕಳ ಸುರಕ್ಷತೆಗೆ ಆದ್ಯತೆ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ.

ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ ಅಂತರ ಸ್ಯಾನಿಟೈಸರ್ ಬಳಕೆ ಮತ್ತು ಮಾಸ್ಕ್ ಅನ್ನು ಸಿಬ್ಬಂದಿ ಹಾಗು ವಿದ್ಯಾರ್ಥಿಗಳಿಗೆ ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಅನ್ನು ರಾಜ್ಯದ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ ಮತ್ತು ಇತರೆ ಸಂಘ ಸಂಸ್ಥೆಗಳು ಉಚಿತವಾಗಿ ನೀಡಲಿವೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ