ಯಾದಗಿರಿ : ಗ್ರೀನ್ ಝೋನ್ ಯಾದಗಿರಿಗೆ ಕೊರೊನಾ ಕಂಟಕ ಎದುರಾಗಿದ್ದು, ಯಾದಗಿರಿ ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ.
ಹೊರರಾಜ್ಯದಿಂದ ಬಂದ ಇಬ್ಬರಿಗೆ ಸೋಂಕು ತಗಲಿರುವ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಗ್ರೀನ್ ಝೋನ್ ಯಾದಗಿರಿಯನ್ನು ಲಾಕ್ ಡೌನ್ ಮಾಡಲಾಗಿದೆ. ಮಧ್ಯರಾತ್ರಿಯಿಂದಲೇ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರಲಾಗಿದ್ದು, ಜಿಲ್ಲೆಯಲ್ಲಿ ಅಂಗಡಿ, ಮುಂಗಟ್ಟು ಬಂದ್ ಮಾಡಲಾಗಿದೆ. 24 ಗಂಟೆಗಳ ಕಾಲ ಲಾಕ್ ಡೌನ್ ಗೆ ಯಾದಗಿರಿ ಡಿಸಿ ಕೂರ್ಮಾರಾವ್ ಆದೇಶಿಸಿದ್ದಾರೆ.