ಯಾವ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ‌: ಅನುಷ್ಠಾನ ಸಮಿತಿ ಅಧ್ಯಕ್ಷ ರೇವಣ್ಣ ಖಡಕ್‌ ಮಾತು

Sampriya

ಸೋಮವಾರ, 10 ಜೂನ್ 2024 (14:53 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ನೀಡಿರುವ ಗ್ಯಾರಂಟಿಗಳು ನಿಲ್ಲಿಸಿ ಎಂದು ಯಾರೂ ಹೇಳಬೇಡಿ. ಎಷ್ಟೇ ದೊಡ್ಡ ನಾಯಕರು ಆದರೂ ಗ್ಯಾರಂಟಿ ನಿಲ್ಲಿಸುವ ಬಗ್ಗೆ ಮಾತನಾಡಬೇಡಿ. ನಾವು ಗ್ಯಾರಂಟಿಗಳನ್ನ ನಿಲ್ಲಿಸುವುದಿಲ್ಲ‌. ಸಣ್ಣ ಪುಟ್ಟ ತಪ್ಪುಗಳು ಇದ್ದರೆ ಸರಿಪಡಿಸುತ್ತೇವೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ  ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂಬ ಚರ್ಚೆ ಹಿನ್ನೆಲೆ ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿರೂ, ಮಾಜಿ ಸಚಿವರು ಆಗಿರುವ  ರೇವಣ್ಣ  ಪ್ರತಿಕ್ರಿಯಿಸಿದ್ದಾರೆ.

ಗ್ಯಾರಂಟಿಗಳಿಗಾಗಿ ₹ 36 ಸಾವಿರ ಕೋಟಿ ಖರ್ಚು ನಿರೀಕ್ಷಿಸಲಾಗಿತ್ತು. ಅದು‌ 46 ಸಾವಿರ ಕೋಟಿಗೆ ಏರಿಕೆ ಆಗಿದೆ. ಆದರೂ ಅದು ನಮ್ಮ ಬದ್ಧತೆ. ನಾವು ಬದುಕಿಗಾಗಿ ಇದ್ದೇವೆ, ಬಿಜೆಪಿಯವರು ಕೇವಲ ಭಾವನೆಗಳಿಗಾಗಿ ಇದ್ದಾರೆ ಎಂದು ಟೀಕಿಸಿದ್ದಾರೆ.

ಎಲ್ಲ ಕಡೆಗಳಿಂದ ದೂರು ಬಂದಿವೆ. ಒಂದೇ ಮನೆಯಲ್ಲಿ ಇಬ್ಬರು ಫಲಾನುಭವಿಗಳ ಇರುವ ಬಗ್ಗೆ ದೂರು ಬಂದಿವೆ. ಅವುಗಳನ್ನು ಪರಿಶೀಲನೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಬರದ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳಿತು ಮೈಸೂರು-ಕೊಡಗು ಕ್ಷೇತ್ರದ ಪರಾಜಿತ ಕೈ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರು ಮತದಾರರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ