ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಸಿಎಂ ಭಾಗಿ

ಸೋಮವಾರ, 17 ಸೆಪ್ಟಂಬರ್ 2018 (19:19 IST)
ಕಲಬುರಗಿಯ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿಯಿಂದ ಆಯೋಜಿಸಿದ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಹೈದ್ರಾಬಾದ್ ಕರ್ನಾಟಕ ಭಾಗ ಭಾರತದ ಅತ್ಯಂತ ಒಣ ಪ್ರದೇಶಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿದೆ. ಸತತ ಬರಗಾಲಗಳ ಕಾರಣ ಇಲ್ಲಿ ಅಭಿವೃದ್ಧಿ ಮರೀಚಿಕೆಯಾಗಿತ್ತು. ಡಾ. ನಂಜುಂಡಪ್ಪ ವರದಿಯ ಪ್ರಕಾರ ಅಂದು ಈ ಭಾಗದಲ್ಲಿದ್ದ 31 ತಾಲ್ಲೂಕುಗಳಲ್ಲಿ 28 ತಾಲ್ಲೂಕುಗಳು ಹಿಂದುಳಿದಿದ್ದವು.  ಈ ಹಿನ್ನೆಲೆಯಲ್ಲಿ ಹೈದ್ರಾಬಾದ್ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ನೀಡಬೇಕು ಎಂಬ ಮತ್ತೊಂದು ಹೋರಾಟ ಪ್ರಾರಂಭವಾಯಿತು.

ದಶಕಗಳ ಹೋರಾಟದಲ್ಲಿ ನಿರತರಾದ ಹಿರಿಯರಾದ ವೈಜನಾಥ ಪಾಟೀಲ, ಕಲಬುರಗಿ   ಸಂಸದರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ದಿ. ಎನ್. ಧರಂಸಿಂಗ್ ಮತ್ತಿತರ ನಾಯಕರ ಹಾಗೂ ಹೋರಾಟಗಾರರ ಸತತ ಹೋರಾಟ, ಪ್ರಯತ್ನಗಳ ಫಲವಾಗಿ ಕೇಂದ್ರ ಸರ್ಕಾರವು ಸಂವಿಧಾನ ಕಲಂ 371 ಕ್ಕೆ ತಿದ್ದುಪಡಿ ತಂದು (ಜೆ) ಪರಿಚ್ಛೇದ ಸೇರಿಸುವ ಮೂಲಕ ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿ ವಿದ್ಯಾಭ್ಯಾಸ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಹಾಗೂ ಅಭಿವೃದ್ಧಿ ಕಾರ್ಯ ಚುರುಕುಗೊಳಿಸಲು ಅವಕಾಶ ಕಲ್ಪಿಸಲಾಯಿತು ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ