ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಮ್ಯಾನುಯೆಲ್ ಸ್ಕ್ಯಾವೆಂಜರ್ಸ್ ಸಮೀಕ್ಷೆ ನಡೆಸಲು ನ್ಯಾಯಾಲಯ ಹಿಂದೆಯೇ ನಿರ್ದೇಶಿಸಲಾಗಿದೆ. ಆದರೆ, ಇದುವರೆಗೆ ಅದು ಆಗಿಲ್ಲ ಎಂದಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಕಾಯ್ದೆ ಪ್ರಕಾರ ಮ್ಯಾನುಯೆಲ್ ಸ್ಕ್ಯಾವೆಂಜರ್ಸ್ ಸಮೀಕ್ಷೆ ನಡೆಸಲು ನೋಡಲ್ ಅಧಿಕಾರಿ ನೇಮಕಾತಿ ಕುರಿತು ಸರ್ಕಾರ ತಿಳಿಸಿದೆ. ಹೀಗಾಗಿ, ಎರಡು ತಿಂಗಳಲ್ಲಿ ಮ್ಯಾನುಯೆಲ್ ಸ್ಕ್ಯಾವೆಂಜರ್ಸ್ ಸಮೀಕ್ಷೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ.