ಬೆಂಗಳೂರು : ತಮ್ಮ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ಮಾನಹಾನಿ ಕೇಸ್ ರದ್ದುಗೊಳಿಸುವಂತೆ ಕೋರಿದ್ದ ಡಿ. ರೂಪಾ ಮೌದ್ಗಿಲ್ ಅವರ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.
ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ಸೋಮವಾರ (ಆ.21) ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದರೆ ಪ್ರಕರಣ ರದ್ದು ಕೋರಿದ್ದ ಡಿ.ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದೆ.
ಈ ಮೂಲಕ ಹೈಕೋರ್ಟ್ ನಲ್ಲಿ ರೂಪಾ ಮೌದ್ಗಿಲ್ ಗೆ ಹಿನ್ನಡೆ ಉಂಟಾಗಿದ್ದು, ಮತ್ತೆ ಸಂಕಷ್ಟ ಎದುರಾಗಿದೆ. ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ಹೈಕೋರ್ಟ್ ನಕಾರ ಮಾಡಿದೆ.