ವಿಚಾರಣೆ ಸಂದರ್ಭದಲ್ಲಿ ಬಿಬಿಎಂಪಿ ವಕೀಲರು, ನಗರದಾದ್ಯಂತ ಪ್ರತಿದಿನ ಗುಂಡಿ ಮುಚ್ಚುತ್ತಿದ್ದೇವೆ. ಮಳೆ ಕಾರಣದಿಂದ ಗುಂಡಿ ಮುಚ್ಚುವ ಕೆಲಸ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ ಎಂಬ ಹೇಳಿಕೆಯನ್ನು ಟೀಕಿಸಿರುವ ನ್ಯಾಯಾಲಯ, ಪಾಲಿಕೆಯ ಮಸೂರದಲ್ಲೇ ಸಮಸ್ಯೆ ಇದೆ. ಹೀಗಾಗಿಯೇ ಪಾಲಿಕೆಗೆ ಕೇವಲ ಸಚಿವರ ಮನೆ, ಹೈಕೋರ್ಟ್ ಹಾಗೂ ವಿಧಾನಸೌಧಗಳ ಮುಂದಿನ ರಸ್ತೆಗಳು ಮಾತ್ರ ಕಾಣಿಸುತ್ತಿವೆ. ಅದರಲ್ಲಿ ಜನಸಾಮಾನ್ಯರು ಸಂಚರಿಸುವ ರಸ್ತೆಗಳು ಕಾಣುತ್ತಿಲ್ಲ ಎಂದು ಚಾಟಿ ಬೀಸಿದೆ.ಅಂತಿಮವಾಗಿ, ನಗರದ ಎಲ್ಲ ರಸ್ತೆಗಳಲ್ಲಿನ ಗುಂಡಿಗಳನ್ನೂ ಮುಚ್ಚಬೇಕು ಹಾಗೂ ಗುಂಡಿ ಮುಚ್ಚುವ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಪಾಲಿಕೆಗೆ ನಿರ್ದೇಶಿಸಿರುವ ಹೈಕೋರ್ಟ್, ಕಾಮಗಾರಿಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು 2 ವಾರಗಳಲ್ಲಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನ.11ಕ್ಕೆ ಮುಂದೂಡಿದೆ.