ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
ಬೆಂಗಳೂರು :ದೇಶ ವಿಭಜನೆಯ ಮಾತನಾಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು' ಎಂದಿದ್ದ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಈ ಆದೇಶ ಮಾಡಿದೆ.