ಶಕ್ತಿ ಯೋಜನೆ ಪ್ರಶ್ನಿಸಿದ್ದ ಅರ್ಜಿಗೆ ಹೈಕೋರ್ಟ್ ಆಕ್ಷೇಪ
ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯಿಂದ ಹಲವು ಸಮಸ್ಯೆಗಳು ಸೃಷ್ಟಿಯಾಗಿದೆ ಎಂದು ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದ ಕಾನೂನು ವಿದ್ಯಾರ್ಥಿಗಳ ಬಗ್ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅರ್ಜಿ ಸಲ್ಲಿಸುವ ಮುನ್ನ ಅರ್ಜಿದಾರರು ಸಮರ್ಪಕ ಅಧ್ಯಯನ ನಡೆಸಿಲ್ಲ ಎಂದು ನುಡಿದ ನ್ಯಾಯಪೀಠ, ಏಕೆ ಸಾರಿಗೆ ನಿಯಮಗಳನ್ನು ಅಧ್ಯಯನ ನಡೆಸಿಲ್ಲ, ಸರ್ಕಾರ ದುರ್ಬಲ ವರ್ಗಗಳಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡಿದೆಯಲ್ಲವೇ, ಹಾಗಾದರೆ, ಯೋಜನೆಯನ್ನು ಪ್ರಶ್ನಿಸಲಾಗಿದೆಯೇ? ದಟ್ಟಣೆ ಕುರಿತು ಪರಿಹಾರ ಕೋರಲಾಗಿದೆಯೇ, ಮುಂಬೈ ಲೋಕಲ್ ರೈಲುಗಳ ದಟ್ಟಣೆಯ ನಿಮಗೆ ಅರಿವಿದೆಯೇ ಎಂದು ಪ್ರಶ್ನಿಸುವ ಮೂಲಕ ಬೇಸರ ವ್ಯಕ್ತಪಡಿಸಿತು.ಅಂತಿಮವಾಗಿ ಸೂಕ್ತ ಅಧ್ಯಯನ ನಡೆಸಿದ ನಂತರ ಅಗತ್ಯ ದಾಖಲೆ ಹಾಗೂ ಸಿದ್ಧತೆಗಳೊಂದಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಬಹುದು ಎಂದು ಸಲಹೆ ನೀಡಿದ ನ್ಯಾಯಪೀಠ, ಅರ್ಜಿ ಹಿಂಪಡೆಯಲು ಆರ್ಜಿದಾರರಿಗೆ ಅನುಮತಿ ನೀಡಿ ಆದೇಶವನ್ನ ಹೊರಡಿಸಿದೆ.